Publish Date: Fri, 27 Apr 2018 (14:19 IST)
Updated Date: Fri, 27 Apr 2018 (14:20 IST)
ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ (27) ಸಾವನ್ನಪ್ಪಿದ್ದಾರೆ. ಮತ್ತೋರ್ವ ಜೆಡಿಎಸ್ ಕಾರ್ಯಕರ್ತ ನರೇಂದ್ರ ಸ್ಥಿತಿ ಚಿಂತೆ ಜನಕವಾಗಿದೆ.
ಚಿಂತಾಜನಕ ಸ್ಥಿತಿಯಲ್ಲಿರುವ ನರೇಂದ್ರನನ್ನ ದೊಡ್ಡಬಳ್ಳಾಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌರಿಬಿದನೂರು ತಾಲ್ಲೂಕಿನ ಕೋಟಾಲದಿನ್ನೆಯ ಬಾರ್ ಬಳಿ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲಾಂಗ್ ಮಚ್ಚುಗಳಿಂದ ಕಾಂಗ್ರೆಸ್ ಬೆಂಬಲಿತ ರೌಡಿಶೀಟರ್ ರಮೇಶ್ ನಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಜೆಡಿಎಸ್ ಕಾರ್ಯಕರ್ತ ರಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತಿಬ್ಬರು ಜೆಡಿಎಸ್ ಕಾರ್ಯಕರ್ತ ರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತ ರೌಡಿಶೀಟರ್ ರಮೇಶ್ ಗೂ ಸಣ್ಣ-ಪುಟ್ಟ ಗಾಯವಾಗಿದೆ. ಉದ್ರಿಕ್ತರು ಪೊಲೀಸ್ ಜೀಪಿನ ಮೇಲೆ ಕಲ್ಲೆಸೆದು ಗಾಜು ಜಖಂ ಮಾಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡು ಪರಿಶೀಲನೆ ಮಾಡಿದ್ದಾರೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆಗೊಳಿಸಲಾಗಿದೆ. ಈ ಕುರಿತುಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.