Select Your Language

Notifications

webdunia
webdunia
webdunia
webdunia

ಫ್ಲೆಕ್ಸ್, ಬ್ಯಾನರ್ಸ್ ತೆರವು ವೇಗವಾಗಿ ನಡೆಯಲಿ : ಗುಪ್ತ

ಫ್ಲೆಕ್ಸ್, ಬ್ಯಾನರ್ಸ್ ತೆರವು ವೇಗವಾಗಿ ನಡೆಯಲಿ : ಗುಪ್ತ
ಬೆಂಗಳೂರು , ಸೋಮವಾರ, 28 ಫೆಬ್ರವರಿ 2022 (18:19 IST)
ಬೆಂಗಳೂರು : ನಗರದಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ಗಳನ್ನು ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಬೇಕಿದ್ದು,

ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಧಿಕಾರಿಗಳು ತತ್ಕ್ಷಣ ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಬ್ಯಾನರ್ಸ್ಗಳ ತೆರವುಗೊಳಿಸುವಿಕೆ ಬಗ್ಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳನ್ನು ವ್ಯಾಪಕವಾಗಿ ಅಳವಡಿಸಲಾಗುತ್ತಿದೆ.

ಆಯಾ ವಲಯ ವ್ಯಾಪ್ತಿಯಲ್ಲಿಯ ಸ್ಥಳೀಯ ಅಧಿಕಾರಿಗಳು ಯಾವುದೇ ಫ್ಲೆಕ್ಸ್ಗಳನ್ನು ಅಳವಡಿಸಲು ಬಿಡಬಾರದು. ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸುವಂತಹವರ ಮೇಲೆ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದರು.

ನಗರದಲ್ಲಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್, ಭಿತ್ತಿಪತ್ರ, ಬಾವುಟಗಳು ಸೇರಿದಂತೆ ಇತ್ಯಾದಿ ಜಾಹೀರಾತು/ಪ್ರಕಟಣೆಗಳ ಅಳವಡಿಕೆಯು ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದರು.

ಆದರೂ ಸಹ ನಗರದಲ್ಲಿ ಮತ್ತೆ ಮತ್ತೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾರ್ನರ್ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳಾಗುವಂತಹ ಕೆಲಸ ಮಾಡಲಾಗುತ್ತಿದೆ. ಈ ಸಂಬಂಧ ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ತೆರವು ಕಾರ್ಯಾಚರಣೆ ಮಾಡಿ, ಯಾವುದೇ ಅನಧಿಕೃತ ಫ್ಲೆಕ್ಸ್ಗಳು ಇರದಂತೆ ಕ್ರಮವಹಿಸಲು ಸೂಚನೆ ನೀಡಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಾದಯಾತ್ರೆ ನಾಟಕ