Select Your Language

Notifications

webdunia
webdunia
webdunia
webdunia

ಭಾರಿ ಮಳೆಯಿಂದ ಪ್ರವಾಹ: ಏರಿಕೆಯಾದ ಸಾವಿನ ಸಂಖ್ಯೆ!

ಭಾರಿ ಮಳೆಯಿಂದ ಪ್ರವಾಹ: ಏರಿಕೆಯಾದ ಸಾವಿನ ಸಂಖ್ಯೆ!
ಆಂಧ್ರ ಪ್ರದೇಶ , ಸೋಮವಾರ, 22 ನವೆಂಬರ್ 2021 (21:35 IST)
ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಭಾರಿ ಮಳೆ ಕಾರಣ ಪೆನ್ನಾ ನದಿ ಉಕ್ಕಿ ಹರಿದ ಪರಿಣಾಮ ದಕ್ಷಿಣ ಮತ್ತು ಪೂರ್ವಕ್ಕೆ ಸಂಪರ್ಕ ಕಲ್ಪಿಸುವ ಆಂಧ್ರಪ್ರದೇಶದ ಮುಖ್ಯ ರೈಲು ಮತ್ತು ರಸ್ತೆ ಮಾರ್ಗಗಳು ಕಡಿತಗೊಂಡಿವೆ.  ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿ-16ರ ಎಸ್ಪಿಎಸ್ ನೆಲ್ಲೂರು ಜಿಲ್ಲೆಯ ಪಡುಗುಪಾಡುವಿನಲ್ಲಿ ಭಾರಿ ಪ್ರಮಾಣದ ನೀರು ಹರಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಪಡುಗುಪಾಡು ರೈಲ್ವೆ ಹಳಿಯ ಮೇಲೆ ಪ್ರವಾಹದ ನೀರು ಉಕ್ಕಿ ಹರಿಯುತ್ತಿದ್ದು ಚೆನ್ನೈ-ವಿಜಯವಾಡ ಗ್ರ್ಯಾಂಡ್ ಟ್ರಂಕ್ ಮಾರ್ಗದಲ್ಲಿ ಕನಿಷ್ಠ 17 ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಣದಾಸೆಗಾಗಿ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ, ಹಲ್ಲೆಗೈದು, ಲಕ್ಷಾಂತರ ರೂಪಾಯಿ ಹಣ ವಸೂಲಿ