ಬೆಂಗಳೂರು : ಚುನಾವಣೆ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳನ್ನ ಕೊಟ್ಟ ಮಾತಿನಂತೆ ಈಡೇರಿಸಲು ಸರ್ಕಾರ ಮುಂದಾಗಿದೆ.
ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯ ಸಾಮಾನ್ಯ ಬಸ್ಗಳಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ನೀಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು. ಯಾವ ಕಂಡೀಷನ್ಸ್, ಗೈಡ್ಲೈನ್ಸ್ ಇಲ್ಲ. ಕೆಲಸಕ್ಕೆ ಹೋಗೋರು, ಕೆಲಸಕ್ಕೆ ಹೋಗದೇ ಇರುವವರು, ಎಪಿಎಲ್, ಬಿಪಿಎಲ್ ಎಂಬ ತಾರತಮ್ಯ ಇಲ್ಲ.
ಮಹಿಳೆಯರು ರಾಜ್ಯಾದ್ಯಂತ ಸಂಚರಿಸಬಹುದು ಎಂದು ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಆದರೆ ಯಾವಾಗಿಂದ ಈ ಗ್ಯಾರಂಟಿ ಜಾರಿ ಅನ್ನೋದರ ಗುಟ್ಟನ್ನು ಮಾತ್ರ ಬಿಟ್ಟುಕೊಡಲಿಲ್ಲ.