Select Your Language

Notifications

webdunia
webdunia
webdunia
webdunia

ಪ್ರತಿ ಮನೆಗೆ ಉಚಿತ ವಿದ್ಯುತ್

ಪ್ರತಿ ಮನೆಗೆ ಉಚಿತ ವಿದ್ಯುತ್
ಚಂಡೀಗಢ , ಶನಿವಾರ, 16 ಏಪ್ರಿಲ್ 2022 (10:48 IST)
ಚಂಡೀಗಢ : ಜುಲೈ 1 ರಿಂದ ಪ್ರತಿಯೊಂದು ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪಂಜಾಬ್ನ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಘೋಷಿಸಿದೆ.

ಮಂಗಳವಾರ ಟ್ವೀಟ್ ಮಾಡಿದ್ದ ಭಗವಂತ್ ಮಾನ್ ಅವರು, ನಮ್ಮ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ಪಂಜಾಬ್ ಜನತೆಗೆ ಒಳ್ಳೆಯ ಸುದ್ದಿ ನೀಡುತ್ತೇನೆ ಎಂದು ತಿಳಿಸಿದ್ದರು. 

ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಎಎಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಪ್ರತಿ ಮನೆಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದು ಒಂದಾಗಿತ್ತು.

ಸದ್ಯ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಸರಬರಾಜು ಘೋಷಿಸುವ ವೇಳೆ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ, ದೀರ್ಘ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗುತ್ತದೆ ಮತ್ತು ಅನೇಕ ಜನರು ದುಬಾರಿ ಬಿಲ್ಗಳನ್ನು ಪಡೆಯುತ್ತಾರೆ ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ತಪ್ಪಾದ ಬಿಲ್ಗಳನ್ನು ಪಡೆದ ಅನೇಕ ಜನರಿದ್ದಾರೆ ಮತ್ತು ವಿದ್ಯುತ್ ಬಿಲ್ ಪಾವತಿಸದೇ ಇರುವವರ ವಿದ್ಯುತ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಅಂತಹ ಜನರು ವಿದ್ಯುತ್ ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‍ಗೆ ಬೊಮ್ಮಾಯಿ ಟಾಂಗ್