Publish Date: Sat, 14 Apr 2018 (08:21 IST)
Updated Date: Sat, 14 Apr 2018 (08:24 IST)
ಬೆಂಗಳೂರು : ನಟಿ ಅಮೂಲ್ಯ ಅವರ ಮಾವ ಜಿ.ಎಚ್.ರಾಮಚಂದ್ರ ಅವರು ಇದೀಗ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ಎರಡು ದಶಕದಿಂದಲೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ರಾಮಚಂದ್ರ ಅವರು ರಾಜರಾಜೇಶ್ವರಿ ನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು. ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಇವರು ಜೆಡಿಎಸ್ ಸೆರ್ಪಡೆಗೊಂಡಿದ್ದು, ರಾಜರಾಜೇಶ್ವರಿನಗರದಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಸಂಭವವಿದೆ.
ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನಿರಾಕರಿಸಲಾಗಿರುವುದರಿಂದ , ರಾಮಚಂದ್ರ ಅವರಿಗೇ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ