Webdunia - Bharat's app for daily news and videos

Install App

ಓಮಿಕ್ರಾನ್ ನಿಂದ ಜಾಗತಿಕ ಅಪಾಯ ಹೆಚ್ಚು: WHO

Webdunia
ಮಂಗಳವಾರ, 30 ನವೆಂಬರ್ 2021 (11:29 IST)
ಜಿನೀವಾ : ಓಮಿಕ್ರಾನ್ ಕೊರೊನಾ ವೈರಸ್ ರೂಪಾಂತರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ.
ಕೆಲವು ದೇಶಗಳಿಗೆ ಇದು ಹೆಚ್ಚು ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಓಮಿಕ್ರಾನ್ ಸೋಂಕಿನಿಂದ ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಲಸಿಕೆ ಇದರ ವಿರುದ್ಧ ಹೋರಾಡುವ ಸಾಮಥ್ರ್ಯ ಹೊಂದಿದೆಯೇ, ಇದು ನಮಗೆ ರಕ್ಷಣೆ ನೀಡುತ್ತದೆಯೇ ಎಂಬುದನ್ನು ಅರಿಯಲು ಸಂಶೋಧನೆಯ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಕಳೆದ ವಾರ ಮೊದಲ ಓಮಿಕ್ರಾನ್ ಪ್ರಕರಣ ವರದಿಯಾಯಿತು. ಅಲ್ಲಿಂದ ಇಲ್ಲಿಯವರೆಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವಿಶ್ವ ಸಂಸ್ಥೆಯು ತನ್ನ 194 ಸದಸ್ಯ ರಾಷ್ಟ್ರಗಳಿಗೆ ವ್ಯಾಕ್ಸಿನೇಷನ್ನನ್ನು ವೇಗಗೊಳಿಸಲು ಮತ್ತು ಆರೋಗ್ಯ ಸೇವೆಗಳನ್ನು ನೀಡಲು ಯೋಜನೆಗಳನ್ನು ಜಾರಿಗೊಳಿಸಿ. ಓಮಿಕ್ರೋನ್ ರೂಪಾಂತರಿ ವ್ಯಕ್ತಿ ಪ್ರತಿರಕ್ಷಣಾ ಸಾಮರ್ಥ್ಯದಿಂದ ತಪ್ಪಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ.
ಡೆಲ್ಟಾದಿಂದಲೂ ಅತಿ ಹೆಚ್ಚು ವೇಗವಾಗಿ ಹರಬಡಲ್ಲುದು. ಜಾಗತಿಕ ಮಟ್ಟದಲ್ಲಿ ಹೆಚ್ಚು ಹರಡುವ ಸಂಭವನೀಯತೆ ಇದೆ. ತೀವ್ರ ಪರಿಣಾಮ ಉಂಟಾಗಬಹುದು ಎಂದು ಮುನ್ಸೂಚನೆ ಕೊಟ್ಟಿದೆ. ಹೊಸ ರೂಪಾಂತರಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಜಾಗತಿಕ ಅಪಾಯ ಅತಿ ಹೆಚ್ಚು ಎಂದು ವಿಶ್ವ ಸಂಸ್ಥೆ ಹೇಳಿದೆ.
 ಓಮಿಕ್ರಾನ್ ಪ್ರಕರಣ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ 24 ರಂದು ವರದಿಯಾಗಿದೆ. ಅಲ್ಲಿ ಸೋಂಕುಗಳು ತೀವ್ರವಾಗಿ ಏರಿಕೆಯಾಗಿವೆ. ಅಂದಿನಿಂದ ಇದು 12ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments