ಬೆಂಗಳೂರು : ಕಳೆದ ಕೆಲ ಸಮಯಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು.
ಹೀಗಾಗಿ ಶುಭಕಾರ್ಯಗಳ ಸೀಸನ್ ಶುರುವಾದ ನಂತರ ಸಹಜವಾಗಿಯೇ ಬಂಗಾರ ಪ್ರಿಯರು ಬೆಲೆ ಇಳಿಕೆಗಾಗಿ ಕಾಯುತ್ತಿದ್ದಾರೆ. ಆದರೆ ಬಜೆಟ್ ಮರುದಿನವೇ ಚಿನ್ನದ ಬೆಲೆ ಏರಿಕೆಯಾಗಿ ಗೋಲ್ಡ್ ಪ್ರಿಯರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
ಇಂದು ಮಾರ್ಚ್ 5 ಶನಿವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹5,204 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹5,204 ರೂ ನಿಗದಿಯಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹47,700 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹52,040 ರೂಪಾಯಿ ದಾಖಲಾಗಿದೆ.
ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದರೆ, ಬೆಳ್ಳಿ ಬೆಲೆಯಲ್ಲಿ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.