Publish Date: Fri, 30 Sep 2022 (10:59 IST)
Updated Date: Fri, 30 Sep 2022 (18:06 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದರು.
ಇದು ಜುಲೈ 1 ರಿಂದಲೇ ಜಾರಿಗೆ ಬರಲಿದೆ. ಜುಲೈ 1 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ಡಿಎ ಹೆಚ್ಚಿಸಿ ಸಚಿವ ಸಂಪುಟ ಅನುಮೋದಿಸಿದೆ.
ಇದರಿಂದ ಸರಿಸುಮಾರು 41.85 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ಆಗಲಿದೆ.