Publish Date: Thu, 01 Dec 2022 (10:18 IST)
Updated Date: Thu, 01 Dec 2022 (09:34 IST)
ಬೆಂಗಳೂರು : ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದು, ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ರೂಪದಲ್ಲಿ ಕಾರ್ಮಿಕರಿಗೆ ಬಸ್ ಪಾಸ್ ವಿತರಣೆ ಮಾಡಲು ಚಿಂತನೆ ನಡೆಸಿದೆ.
ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ನಿಂದ ಸ್ಮಾರ್ಟ್ ಕಾರ್ಡ್ಗೆ ಅಪ್ ಗ್ರೇಡ್ ಮಾಡಲಾಗಿದ್ದು, ಬೆಂಗಳೂರು ಒನ್ ಕೇಂದ್ರಗಳಲ್ಲಿ, ಬಿಎಂಟಿಸಿ ಸಂಸ್ಥೆಯ ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಈ ಸ್ಮಾರ್ಟ್ ಕಾರ್ಡ್ ಸಿಗುತ್ತದೆ.
ಸೇವಾ ಸಿಂಧು ಪೋರ್ಟಲ್ನ ಮೂಲಕ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸ್ಮಾರ್ಟ್ ಕಾರ್ಡ್ ಮಾದರಿಯ ಪಾಸ್ಗಳನ್ನು ವಿತರಣೆ ಮಾಡಲು ಬಿಎಂಟಿಸಿ ಚಿಂತನೆ ನಡೆಸುತ್ತಿದೆ.