ನವದೆಹಲಿ : ಯುಗಾದಿ ಹಬ್ಬದ ನಂತರ ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಟ್ಟಿದೆ. ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಘೋಷಣೆ ಮಾಡಿದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಅಂಗೀಕರಿಸಲ್ಪಟ್ಟ ಸೂತ್ರಕ್ಕೆ ಅನುಗುಣವಾಗಿದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿ ನೀಡಲಾಗಿದ್ದು, ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರವು ತನ್ನ ವ್ಯಾಪ್ತಿಯ 1 ಕೋಟಿಗೂ ಹೆಚ್ಚು ಉದ್ಯೋಗಿಗಳಿಗೆ ತುಟ್ಟಿಭತ್ಯೆ ಶೇ.4.ರಷ್ಟು ಹೆಚ್ಚಿಸಿದೆ. ಒಟ್ಟಾರೆಯಾಗಿ ತುಟ್ಟಿಭತ್ಯೆ ಹೆಚ್ಚಳ ಶೇ.38 ರಿಂದ ಶೇ.42ಕ್ಕೆ ಹೆಚ್ಚಾಗಿದೆ.
ತುಟ್ಟಿಭತ್ಯೆ ಹೆಚ್ಚಳವನ್ನು 2023ರ ಜನವರಿಯಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ತುಟ್ಟಿಭತ್ಯೆ ಹೆಚ್ಚಳವನ್ನು ಪೂರೈಸಲು ಕೇಂದ್ರವು 12,815.60 ಕೋಟಿ ರೂ.ಗಳನ್ನ ಖರ್ಚು ಮಾಡಲಿದೆ. ಇದರಿಂದ ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.