Publish Date: Wed, 16 Nov 2022 (08:01 IST)
Updated Date: Wed, 16 Nov 2022 (09:57 IST)
ಬೆಂಗಳೂರು : ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್ಆರ್ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಜಾರಿಗೊಳಿಸಲಾಗಿದೆ.
ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್,
ಯುನೈಟೆಡ್ ಇಂಡಿಯಾ ವಿಮಾ ಕಂಪನಿಯ ಪ್ರಧಾನ ವ್ಯವಸ್ಥಾಪಕರು ಅಂಗ್ರೂಪ್ ಸೋನಂ ಅವರು ಒಡಂಬಡಿಕೆಗೆ ಸಹಿ ಹಾಕಿದರು.
ಈಗಾಗಲೇ ಭಾರತೀಯ ಸ್ಟೇಟ್ಬ್ಯಾಂಕ್ನೊಂದಿಗೆ ಮಾಡಿಕೊಂಡ 50 ಲಕ್ಷ ವಿಮೆ ಹಾಗೂ ಇಂದು ಯುನೈಟೆಡ್ ಇಂಡಿಯಾ ವಿಮಾ ಕಂಪನಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ. ಸೇರಿ ಒಟ್ಟು 1 ಕೋಟಿ ರೂ. ವಿಮೆ ಪರಿಹಾರ ನೀಡಲು ನಿರ್ಧರಿಸಲಾಗಿದೆ.
Ramya kosira
Publish Date: Wed, 16 Nov 2022 (08:01 IST)
Updated Date: Wed, 16 Nov 2022 (09:57 IST)