Publish Date: Fri, 18 Aug 2023 (11:01 IST)
Updated Date: Fri, 18 Aug 2023 (11:21 IST)
ಮಂಡ್ಯ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ.
ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಲಿದ್ದಾರೆ.
ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ.