ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ನೇಮಕಾತಿಗೆ ನಿರ್ಬಂಧ ವಿಧಿಸಲಾಗಿತ್ತು. ಶೀಘ್ರವೇ, ಉದ್ಯೋಗ ನೇಮಕಾತಿಗೆ ಇರುವ ನಿರ್ಬಂಧ ತೆರವುಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, ' ಇದೇ ವರ್ಷ ಕಲ್ಯಾಣ ಕರ್ನಾಟಕಕ್ಕೆ ಮೀಸಲಿರುವ ಬಾಕಿ ಇರುವ 2 ಸಾವಿರ ಕೋಟಿ ರೂಪಾಯಿ ಹಣವನ್ನ ಬಿಡುಗಡೆ ಮಾಡಲಾಗುವುದು. ಇನ್ನು ಮುಂದಿನ 10 ದಿನಗಳೊಳಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸುತ್ತೇವೆ. ಇದಲ್ದೇ ಮಂಡಳಿಗೆ ಕಾರ್ಯದರ್ಶಿ ಹಾಗೂ ಎಂಜಿನಿಯರ್ ನೇಮಕಕ್ಕೂ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಜವಳಿ ಪಾರ್ಕ್, ಐಟಿ ಪಾರ್ಕ್ ಮರು ಆರಂಭಕ್ಕೆ ಸೂಚನೆ ನೀಡುವ ಜೊತೆಗೆ 371ಜೆ ಆಶೋತ್ತರ ಪೂರ್ಣಗೊಳಿಸುತ್ತೇವೆ. ಒಟ್ಟಾರೇ, ಆ ಭಾಗದ ಜನರಿಗೆ ಆತ್ಮವಿಶ್ವಾಸ ಬರುವಂತೆ ಕೆಲಸ ಮಾಡುತ್ತೇವೆ. ಕಲ್ಯಾಣ ಕರ್ನಾಟಕವನ್ನ ನಿಜವಾದ ಅರ್ಥದಲ್ಲಿ ನನಸು ಮಾಡಲು ಪ್ರಯತ್ನಿಸುತ್ತೇವೆ' ಎಂದರು.