Select Your Language

Notifications

webdunia
webdunia
webdunia
webdunia

ರಾಜ್ಯದ ಜನರಿಗೆ ಗುಡ್ ನ್ಯೂಸ್ : ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ

ರಾಜ್ಯದ ಜನರಿಗೆ ಗುಡ್ ನ್ಯೂಸ್ : ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ
ಬೆಂಗಳೂರು , ಸೋಮವಾರ, 3 ಜುಲೈ 2023 (09:32 IST)
ಬೆಂಗಳೂರು : ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಗೃಹಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಕಚೇರಿ ವಿಶೇಷ ಪ್ರಕಟಣೆ ಹೊರಡಿಸಿದೆ.
 
ಗ್ರಾಹಕರು ವಿದ್ಯುತ್ ಬಿಲ್ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸಬೇಕು. ಮೂರು ತಿಂಗಳು ಕಾಲಾವಕಾಶ ಇದೆ ಎಂದು ಪ್ರಕಟಣೆ ತಿಳಿಸಿದೆ.

ನೀವು ಜುಲೈ 25 ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ ಜುಲೈ 25 ರಿಂದ ಆಗಸ್ಟ್ 25 ರೊಳಗೆ ನೋಂದಾಯಿಸಿಕೊಂಡಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. 

 
ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25ನೇ ದಿನಾಂಕದಿಂದ ಮುಂದಿನ ತಿಂಗಳ 25 ನೇ ದಿನಾಂಕದವರೆಗೆ ಇರುತ್ತದೆ. ಈ ಪ್ರಯೋಜನ ಪಡೆಯಲು ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್ ಮೀರಿರಬಾರದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ವಿಧಾನಮಂಡಲ ಅಧಿವೇಶನ