Webdunia - Bharat's app for daily news and videos

Install App

ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್

Webdunia
ಬುಧವಾರ, 24 ಮೇ 2023 (08:47 IST)
ಆರ್ವಿ ರಸ್ತೆ-ಬೊಮ್ಮಸಂದ್ರ ನಡುವಿನ ಮಾರ್ಗವು ಅತ್ಯಧಿಕ ವಾಹನ ದಟ್ಟಣೆಯಿಂದ ಕೂಡಿದೆ. ಇದರಿಂದ ವಾಹನ ಸವಾರರು ಬಹುಪಾಲು ಸಮಯವನ್ನು ರಸ್ತೆಯಲ್ಲಿಯೇ ಕಳೆಯುವಂತಾಗಿದೆ.
 
ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಶುರುವಾದರೆ ಸಾಕಷ್ಟು ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ಪ್ರಮುಖ ಸಂಪರ್ಕ ಸೇತುವೆಯಾಗಲಿದೆ.

ಆರ್ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 4,255 ಕೋಟಿ ರೂ. ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಶೇ.50 ಕ್ಕೂ ಅಧಿಕ ಕಾಮಗಾರಿ ಮುಗಿದಿದ್ದು, ಉಳಿದಂತೆ ಬಾಕಿ ಇರುವ ಕಾಮಗಾರಿಯನ್ನು ಮುಂದಿನ 6 ತಿಂಗಳಲ್ಲಿ ಪೂರೈಸಿಕೊಳ್ಳಲು ಬಿಎಂಆರ್ಸಿಎಲ್ ಮುಂದಾಗಿದೆ. 

ನಿಲ್ದಾಣಗಳು:

ಆರ್ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ ಬರುವ ಮೆಟ್ರೋ ನಿಲ್ದಾಣಗಳೆಂದರೆ, ಆರ್ವಿ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್, ಕೋನಪ್ಪನ ಅಗ್ರಹಾರ, ಹೊಸೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ.

ಐಟಿ-ಬಿಟಿ ಕಂಪನಿಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ನಮ್ಮ ಮೆಟ್ರೋ ಉತ್ತಮ ಆದಾಯವನ್ನೂ ತಂದುಕೊಡಲಿದೆ. ಈ ಮಾರ್ಗದಲ್ಲಿ ಸುಮಾರು 3.70 ಲಕ್ಷ ಮಂದಿ ಪ್ರಯಾಣಿಸಬಹುದೆಂದು ಅಂದಾಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments