Publish Date: Fri, 01 Jul 2022 (10:42 IST)
Updated Date: Fri, 01 Jul 2022 (09:33 IST)
ಬೆಂಗಳೂರು : ಅತಿಥಿ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ.
ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿಂದೆ ಸಂಭಾವನೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿತ್ತು.
ಇದೀಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು 2,500 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆಯ ಮನವಿಗೆ ಸ್ಪಂದಿಸಿ 2,500 ರೂಪಾಯಿಗೆ ಹೆಚ್ಚಳ ಮಾಡಿರುವ ಸಿಎಂಗೆ ಅಭಿನಂದನೆ ಎಂದು ಬಿ.ಸಿ ನಾಗೇಶ್ ಟ್ವಿಟ್ನಲ್ಲಿ ತಿಳಿಸಿದ್ದಾರೆ.