Select Your Language

Notifications

webdunia
webdunia
webdunia
webdunia

ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧ ; ಸಿಎಂ

ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧ ; ಸಿಎಂ
ಬೆಂಗಳೂರು , ಭಾನುವಾರ, 9 ಜುಲೈ 2023 (10:22 IST)
ಬೆಂಗಳೂರು : ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ 80 ಮಂದಿ ಕನ್ನಡಿಗರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅವರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ತೆರಳಿದ್ದಾರೆ.

ಈ 80 ಮಂದಿ ಕನ್ನಡಿಗರು ಅಮರಾನಾಥ ಮಂದಿರದಿಂದ 6 ಕಿಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಜಿ-20 ಶೃಂಗಸಭೆ