Publish Date: Wed, 28 Jun 2023 (08:43 IST)
Updated Date: Wed, 28 Jun 2023 (10:19 IST)
ಗೃಹಲಕ್ಷ್ಮೀ ಯೋಜನೆ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಗೃಹಲಕ್ಷ್ಮೀ ಹೆಸರಲ್ಲೇ ಪ್ರತ್ಯೇಕವಾದ ಆ್ಯಪ್ ಸಿದ್ಧಪಡಿಸಲಾಗಿದ್ದು, ಸರ್ವರ್ ಸಮಸ್ಯೆಗೆ ಕಡಿವಾಣ ಹಾಕಲು ಆ್ಯಪ್ ತಯಾರಿ ಮಾಡಲಾಗಿದೆ.
ಇಂದಿನ ಕ್ಯಾಬಿನೆಟ್ ಸಭೆ ಬಳಿಕ ಆ್ಯಪ್ ರಿಲೀಸ್ ಮಾಡುವ ಸಾಧ್ಯತೆಯಿದೆ. ಇನ್ನೂ ಸೇವಾಸಿಂಧು ವೆಬ್ಸೈಟ್ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಗೂಗಲ್ ಪ್ಲೇ ಸ್ಟೋರ್, ಆ್ಯಪಲ್ ಸ್ಟೋರ್ನಲ್ಲಿ ಆ್ಯಪ್ ಲಭ್ಯವಾಗಲಿದೆ.