Select Your Language

Notifications

webdunia
webdunia
webdunia
webdunia

ಹೊಸ ಬಿಪಿಎಲ್ ಕಾರ್ಡ್ ಹಂಚಿಕೆಗೆ ಸರ್ಕಾರ ಆದೇಶ

ಹೊಸ ಬಿಪಿಎಲ್ ಕಾರ್ಡ್ ಹಂಚಿಕೆಗೆ ಸರ್ಕಾರ ಆದೇಶ
ಬೆಂಗಳೂರು , ಗುರುವಾರ, 1 ಡಿಸೆಂಬರ್ 2022 (06:57 IST)
ಬೆಂಗಳೂರು : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸ ಆದ್ಯತಾ ಪಡಿತರ ಚೀಟಿ ಕಾರ್ಡ್ ಹಂಚಿಕೆಗೆ ಕೊನೆಗೂ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಹೊಸದಾಗಿ ಬಿಪಿಎಲ್ ಕಾರ್ಡ್ ಹಂಚಿಕೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.

ಹೊಸದಾಗಿ 1,55,927 ಕಾರ್ಡ್ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ವರ್ಷ ಆಗಸ್ಟ್ ಅಂತ್ಯದ ವರೆಗೆ ಆನ್ ಲೈನ್ ಮೂಲಕ ಸುಮಾರು 2,77,662 ಅರ್ಜಿಗಳು ಬಿಪಿಎಲ್ ಕಾರ್ಡ್ಗೆ ಸಲ್ಲಿಕೆ ಆಗಿದ್ದವು.

ಈಗ ಅವುಗಳ ಪರಿಶೀಲನೆ ಮಾಡಿರೋ ರಾಜ್ಯ ಸರ್ಕಾರ ಅರ್ಹತೆ ಪಡೆದ 1,55,927 ಅರ್ಜಿಗಳಿಗೆ ಕಾರ್ಡ್ ನೀಡಲು ಆದೇಶ ಮಾಡಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ