Select Your Language

Notifications

webdunia
webdunia
webdunia
webdunia

9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ

9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ
ಚಿಕ್ಕಮಗಳೂರು , ಶನಿವಾರ, 24 ಸೆಪ್ಟಂಬರ್ 2022 (10:59 IST)
ಚಿಕ್ಕಮಗಳೂರು : ಸಾವಿನಲ್ಲೂ ಸಾರ್ಥಕತೆ ಮೆರೆದ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತ ಕುಟುಂಬಕ್ಕೆ ರಾಜ್ಯ ಸರ್ಕಾರ ಎಂಟು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಫಸ್ಟ್ ಪಿಯುಸಿ ಓದುತ್ತಿದ್ದ 18 ವರ್ಷದ ಯುವತಿ ರಕ್ಷಿತಾ, ಐದು ದಿನಗಳ ಹಿಂದೆ ಸರ್ಕಾರಿ ಬಸ್ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು.

ಕೂಡಲೇ ಆಸ್ಪತ್ರೆಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹಾಗಾಗಿ, ರಕ್ಷಿತಾ ಪೋಷಕರು ಆಕೆಯ ಸಾವಿನ ನೋವಿನಲ್ಲೂ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದರು. 

ಆಕೆಯ ಒಂಬತ್ತು ಅಂಗಾಂಗಳಿಂದ 9 ಜನರ ಜೀವ ಉಳಿದಿದೆ. ಹಾಗಾಗಿ, ಸರ್ಕಾರ ಆಕೆಯ ಕುಟುಂಬಕ್ಕೆ ಪರಿಹಾರ ಎನ್ನುವುದಕ್ಕಿಂತ ಗೌರವಯುತವಾಗಿ ಎಂಟು ಲಕ್ಷ ರೂ. ಹಣವನ್ನು ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕರೆಂಟ್ ಶಾಕ್ : ಅಕ್ಟೋಬರ್ನಿಂದ 43 ಪೈಸೆ ಏರಿಕೆ