Select Your Language

Notifications

webdunia
webdunia
webdunia
webdunia

ಜನಸಾಮಾನ್ಯರಿಗೆ ಶಾಕ್ ಕೊಟ್ಟ ಸರ್ಕಾರ..!

ಜನಸಾಮಾನ್ಯರಿಗೆ ಶಾಕ್ ಕೊಟ್ಟ ಸರ್ಕಾರ..!
ನವದೆಹಲಿ , ಬುಧವಾರ, 6 ಅಕ್ಟೋಬರ್ 2021 (13:08 IST)
ನವದೆಹಲಿ(ಅ.06) : ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಗೃಹೋಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ.

ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಎಣ್ಣೆ ಬೆಲೆಯೂ ಹೆಚ್ಚಾಗುತ್ತಿದೆ. ದಿನಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಸರ್ಕಾರ  ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಹಾಕಿದೆ. ಪ್ರತಿದಿನ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಈ ತಿಂಗಳು 15 ರೂಪಾಯಿ ಹೆಚ್ಚು ಮಾಡುವ ಮೂಲಕ ಜನಸಾಮಾನ್ಯರಿಗೆ ಶಾಕ್ ನೀಡಿದೆ.
ವಿವಿಧ ನಗರಗಳಲ್ಲಿ ಹಿಂದೆ ಇದ್ದ ಎಲ್ಪಿಜಿ ಸಿಲಿಂಡರ್ ಬೆಲೆ:
ನವದೆಹಲಿ- 884.50 ರೂ.
ಕೊಲ್ಕತ್ತಾ-911 ರೂ.
ಮುಂಬೈ-884.50 ರೂ.
ಚೆನ್ನೈ-900.50 ರೂ.
ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆಯೂ ಹೆಚ್ಚಾಗುತ್ತಿದೆ. ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್ಗೆ 30 ಪೈಸೆ ಹೆಚ್ಚಾಗಿದ್ದು, 102.94 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಂತೆಯೇ ಡೀಸೆಲ್ ಬೆಲೆಯೂ 35 ಪೈಸೆ ಹೆಚ್ಚಳವಾಗಿದ್ದು, ಒಂದು ಲೀಟರ್ ಡೀಸೆಲ್ಗೆ 91.42 ರೂ. ಇದೆ.


Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಮೇಲೆ 'ವ್ಯವಸ್ಥಿತ ದಾಳಿ'ನಡೆದಿದೆ