ಬೆಂಗಳೂರು : ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ.
ಕಳೆದ ವಾರ ನಡೆದ ಘಟನೆಯ ಹಿಂದೆ ಉಗ್ರರ ದೊಡ್ಡ ಸಂಚೇ ಇತ್ತು ಎಂಬುದು ಬೆಳಕಿಗೆ ಬರುತ್ತಲೇ ಇದರ ತನಿಖೆಯನ್ನು ಎನ್ಐಎಗೆ ವಹಿಸಬೇಕೆಂಬ ಒತ್ತಾಯ ಕೇಳಿಬರುತ್ತಿತ್ತು.
ಇದೀಗ ಮಂಗಳೂರು ಸ್ಫೋಟ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳೂರಿನ ಕಂಕನಾಡಿ ಸಮೀಪ ಕುಕ್ಕರ್ ಬಾಂಬ್ ಸ್ಫೋಟ ಘಟನೆಯ ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.