Publish Date: Sat, 08 Jan 2022 (07:07 IST)
Updated Date: Sat, 08 Jan 2022 (09:09 IST)
ಬೆಂಗಳೂರು : ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರಿಗೆ ಗ್ರೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಬಸ್ಗಳಲ್ಲಿ ಪ್ರಯಾಣ ಅಥವಾ ಹೋಟೆಲ್, ರೆಸ್ಟೋರೆಂಟ್ ಪ್ರವೇಶ ಹಾಗೂ ಇತರೆ ಅನುಮತಿಗಳಿಗಾಗಿ ಈ ಪಾಸ್ಗಳು ಮುಖ್ಯವಾಗಲಿವೆ ಎಂದು ಹೇಳಿದ್ದಾರೆ.
ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ. ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ. ಕಳೆದ ಎರಡು ಅಲೆಗಳ ವೇಳೆ ಅನುಭವ ಪಡೆದ ಅಧಿಕಾರಿಗಳು ಈ ಬಾರಿ ಯಾವುದೇ ಲೋಪ ಆಗದಂತೆ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ.