Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದಿಂದ CP, TP, ZP ಚುನಾವಣೆಗೆ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರದಿಂದ CP, TP, ZP ಚುನಾವಣೆಗೆ ಗ್ರೀನ್ ಸಿಗ್ನಲ್
ಬೆಂಗಳೂರು , ಮಂಗಳವಾರ, 21 ಸೆಪ್ಟಂಬರ್ 2021 (13:13 IST)
ಬೆಂಗಳೂರು : ಕೊರೋನಾ ಕಾರಣದಿಂದಾಗಿ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದಂತ ಸಿಪಿ, ಟಿಪಿ ಮತ್ತು ಜಿಲ್ಲಾ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್, ಉಪ ಮೇಯರ್ ಹಾಗೂ ಪದಾಧಿಕಾರಿಗಳ ಚುನಾವಣೆಗೆ ಬ್ರೇಕ್ ಹಾಕಲಾಗಿತ್ತು. ಇಂತಹ ಚುನಾವಣೆಗೆ ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡ ಕಾರಣ, ರಾಜ್ಯ ಸರ್ಕಾರ ಮತ್ತೆ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಮಾಹಿತಿ ನೀಡಿದ್ದು, ದಿನಾಂಕ 20-09-2021ರಂದು ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತ್ರ, ರಾಜ್ಯದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ  ಮತ್ತು ನಗರ ಸ್ಥಳೀಯ ಸಂಸ್ಥೆಗಳ  ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್, ಉಪ ಮೇಯರ್ ಹಾಗೂ ಪದಾಧಿಕಾರಿಗಳ ಚುನಾವಣೆಗಳನ್ನು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ನಡೆಸಲು ಸಚಿವ ಸಂಪುಟವು ನಿರ್ಧರಿಸಿತು.
ಮುಂದುವರೆದು ಸಹಕಾರ ಸಂಘಗಳು, ನೋಂದಾಯಿತ ಸೊಸೈಟಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು ಒಳಗೊಂಡಂತೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳನ್ನು ನಡೆಸಲು ಸಹ ಸಚಿವ ಸಂಪುಟವು ನಿರ್ಧರಿಸಿತು ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಹಕಾರ ಸಂಘಗಳು, ನೋಂದಾಯಿತ ಸೊಸೈಟಿಗಳ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಶಾಸಕರಿಗೆ ಖಡಕ್ ಸೂಚನೆ : ಏನದು ಗೊತ್ತಾ?