Select Your Language

Notifications

webdunia
webdunia
webdunia
webdunia

ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಯೋಜನೆ ಆರಂಭ : ಯಾರಿಗೆ ವಿದ್ಯುತ್ ಫ್ರೀ?

ಕಾಂಗ್ರೆಸ್
ಬೆಂಗಳೂರು , ಶನಿವಾರ, 1 ಜುಲೈ 2023 (08:32 IST)
ಬೆಂಗಳೂರು : ಕಾಂಗ್ರೆಸ್ ಸರ್ಕರದ ಗ್ಯಾರಂಟಿ ಯೋಜನೆಗಳ ಜಾರಿಗೆ ಕೌಂಟ್ಡೌನ್ ಶುರುವಾಗಿದೆ. ಜೂನ್ 12 ರಂದು ಶಕ್ತಿ ಯೋಜನೆ ಜಾರಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇದೀಗ ಮತ್ತೆರಡು ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಚಾಲನೆಗೂ ಮುಂದಾಗಿದೆ.
 
ನುಡಿದಂತೆ ನಡೆಯುವ ಸರ್ಕರ ಎಂದಿರುವ ಸಿದ್ದರಾಮಯ್ಯ, ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳನ್ನ ಈಡೇಸಲಿದ್ದಾರೆ. ಈಗಾಗಲೇ ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. 

ಗೃಹಜ್ಯೋತಿ ಯೋಜನೆ ಅಡಿಯಲ್ಲಿ ನಾಳೆಯಿಂದ (ಜು 01ರ ರಾತ್ರಿ 12 ಗಂಟೆ) ಬಳಸುವ 200 ಯುನಿಟ್ ಒಳಗಿನ ಸರಾಸರಿ ಕರೆಂಟ್ಗೆ ಬಿಲ್ ಕಟ್ಟುವಂತಿಲ್ಲ.  ಜುಲೈ ತಿಂಗಳ ವಿದ್ಯುತ್ ಬಿಲ್ ಆಗಸ್ಟ್ ತಿಂಗಳಲ್ಲಿ ಬರಲಿದೆ. ಬರುವ ಕರೆಂಟ್ ಬಿಲ್ ನಲ್ಲಿ ಶಕ್ತಿ ಯೋಜನೆಯಂತೆ ಗೃಹಜ್ಯೋತಿಯ ಉಚಿತ ಬಿಲ್ ಎಂದು ಹೆಸರು ಬರುವ ಸಾಧ್ಯತೆಗಳಿವೆ.

 
12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್ ಸಿಗಲಿದೆ. 12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ರೆ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಿದೆ.

ಇನ್ನು ಈ ಗೃಹಜ್ಯೋತಿ ಅರ್ಜಿ ಸಲ್ಲಿಕೆಯನ್ನ ಜೂನ್ 18 ರಿಂದ ಆರಂಭ ಮಾಡಲಾಗಿದ್ದು, ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದಾರೆ. ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 8099932 ರಷ್ಟು ಜನರು ಅರ್ಜಿ ಹಾಕಿದ್ದಾರೆ. ಇನ್ನು 1,33 00068 ಕೋಟಿಯಷ್ಟು ಜನ ನೊಂದಾಣಿಗೆ ಅರ್ಜಿ ಹಾಕಬೇಕಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ಮೆಟ್ರೋದಲ್ಲಿ ಎರಡು ಬಾಟಲ್ ಕೊಂಡೊಯ್ಯಲು ಅನುಮತಿ