Publish Date: Thu, 20 Jul 2023 (10:02 IST)
Updated Date: Thu, 20 Jul 2023 (10:51 IST)
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ರಾಜ್ಯ ಸರ್ಕಾರ ಕಡೆಗೂ ಚಾಲನೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಬುಧವಾರ ಗೃಹಲಕ್ಷ್ಮಿ ಆ್ಯಪ್ ಬಿಡುಗಡೆ ಮಾಡಿದ್ದಾರೆ.
ಗುರುವಾರದಿಂದ ಅಧಿಕೃತವಾಗಿ ಅರ್ಜಿ ಸ್ವೀಕಾರ ಆರಂಭ ಆಗಲಿದೆ. ಇದಕ್ಕಾಗಿ ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂಬುದು ಮೊಬೈಲ್ಗಳಿಗೆ ಸಂದೇಶ ಬರಲಿದೆ. ಆಗ ನಿಗದಿತ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬೇಕು. ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.
ಮೊಬೈಲ್ ಬಳಕೆ ಯಾರಿಗೆ ಬರುವುದಿಲ್ಲವೋ ಅಂಥವರ ನೋಂದಣಿಗೆ ಅಂಗನವಾಡಿ ಕಾರ್ಯಕರ್ತೆಯರು ನೆರವಾಗಬೇಕು ಎಂದು ಸರ್ಕಾರ ಸೂಚನೆ ನೀಡಿದೆ.