Publish Date: Sun, 16 Jul 2023 (08:12 IST)
Updated Date: Sat, 15 Jul 2023 (23:14 IST)
ಪ್ರತಿ ಫಲಾನುಭವಿ ನೊಂದಣಿಗೆ ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು1902 ಕರೆ ಮಾಡಿ ತಿಳಿದುಕೊಳ್ಳಬಹುದು.
ಜೊತೆಗೆ ಮೊ.ಸಂ.8147500500 ನಂಬರ್ ಗೆ ಎಸ್ಎಂಎಸ್ ಅಥವಾ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆದುಕೊಳ್ಳಬಹುದು.
ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಕ್ಕೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸಂಜೆ 5 ರಿಂದ 7ರ ಅವಧಿಯಲ್ಲಿ ಹೋಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.