Publish Date: Sun, 10 Jun 2018 (11:38 IST)
Updated Date: Sun, 10 Jun 2018 (11:40 IST)
ಬೆಂಗಳೂರು: ತಮಗೆ ಸಿಕ್ಕಿದ ಉನ್ನತ ಶಿಕ್ಷಣ ಸಚಿವ ಸ್ಥಾನದ ಬಗ್ಗೆ ಅಸಮಾಧಾನ ಹೊಂದಿರುವ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಇಂದು ಜೆಡಿಎಸ್ ವರಿಷ್ಠ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿಯವರನ್ನು ಭೇಟಿಯಾಗಲಿದ್ದಾರೆ.
ಮೊನ್ನೆಯಿಂದ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ಜಿಟಿ ದೇವೇಗೌಡ ತಮಗೆ ಲೋಕೋಪಯೋಗಿ ಅಥವಾ ಕಂದಾಯ ಇಲಾಖೆಯಂತಹ ಮಹತ್ವದ ಖಾತೆ ಬೇಕೆಂದು ಪಟ್ಟು ಹಿಡಿದಿದ್ದರು.
ಈ ಖಾತೆ ವಹಿಸಿಕೊಳ್ಳಬೇಡಿ ಎಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರಂತೆ. ಹೀಗಾಗಿ ಈ ಬಗ್ಗೆ ವರಿಷ್ಠರನ್ನು ಭೇಟಿಯಾಗಿ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಅವರು ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.