Select Your Language

Notifications

webdunia
webdunia
webdunia
webdunia

ಗುಟ್ಕಾ ಹಾಗೂ ಪಾನ್ ಮಸಾಲಾ ಯಾವ ರಾಜ್ಯದಲ್ಲಿ ಬ್ಯಾನ್!

ಗುಟ್ಕಾ ಹಾಗೂ ಪಾನ್ ಮಸಾಲಾ ಯಾವ ರಾಜ್ಯದಲ್ಲಿ  ಬ್ಯಾನ್!
ಪಶ್ಚಿಮ ಬಂಗಾಳ , ಬುಧವಾರ, 27 ಅಕ್ಟೋಬರ್ 2021 (11:00 IST)
ಪಶ್ಚಿಮ ಬಂಗಾಳದಲ್ಲಿ ಒಂದು ವರ್ಷದವರೆಗೆ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2021ರ ನವೆಂಬರ್ 7ರವರೆಗೆ ಪಶ್ಚಿಮ ಬಂಗಾಳದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಬ್ಯಾನ್ ಆಗಲಿದೆ. ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಸೆಕ್ಷನ್ 30ರ ಅಡಿಯಲ್ಲಿ ಆಹಾರ ಸುರಕ್ಷತಾ ಆಯುಕ್ತರಿಗೆ ಇಡೀ ರಾಜ್ಯದಲ್ಲಿ ಯಾವುದೇ ಆಹಾರದ ತಯಾರಿಕೆ, ಸಂಗ್ರಹಣೆ, ವಿತರಣೆ ಅಥವಾ ಮಾರಾಟದ ಮೇಲೆ ಅಂತಹ ನಿಷೇಧವನ್ನು ವಿಧಿಸಲು ಅಧಿಕಾರವಿದೆ ಎಂದು ಬಂಗಾಳ ಸರ್ಕಾರ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ಆರಂಭ