Publish Date: Fri, 12 Oct 2018 (12:11 IST)
Updated Date: Fri, 12 Oct 2018 (12:13 IST)
ಬೆಂಗಳೂರು : ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಇತರ ಶಾಸಕರು ಲಿಫ್ಟ್‌ನೊಳಗೆ ಸಿಲುಕಿಕೊಂಡ ಘಟನೆ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದಿದೆ.
ಸಚಿವ ಎಚ್.ಡಿ.ರೇವಣ್ಣ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ ಮತ್ತು ಕೆ.ಎಸ್.ಲಿಂಗೇಶ್, ಜಿಪಂ ಸಿಇಒ ಪುಟ್ಟಸ್ವಾಮಿ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಹಾಗೂ ಸಚಿವರ ಆಪ್ತ ಸಹಾಯಕ ರವಿ ಒಟ್ಡು ಏಳು ಮಂದಿ ಗುರುವಾರ ಸಂಜೆ ಪ್ರಗತಿ ಪರಿಶೀಲನಾ ಸಭೆ ಮುಗಿದ ಲಿಫ್ಟ್‌ನಲ್ಲಿ ಕೆಳಗಿಳಿಯುತ್ತಿದ್ದಾಗ ಲಿಫ್ಟ್ ಓವರ್ ಲೋಡ್ ಆಗಿ ಅರ್ಧದಲ್ಲೆ ನಿಂತಿದೆ.
ಇದರಿಂದ ಸಚಿವರು ಕಂಗಲಾಗಿದ್ದರು. ನಂತರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಲಿಫ್ಟ್ ಬಾಗಿಲನ್ನು ಬಲವಂತವಾಗಿ ತೆರೆದು ಲಿಫ್ಟ್‌ನೊಳಗೆ ಸಿಲುಕಿಕೊಂಡವರನ್ನು ಹೊರಗೆ ಕರೆತಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.