ಕಣ್ಣೀರು ಹಾಕಿದ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ಕುಮಾರಸ್ವಾಮಿ, ದೇವೇಗೌಡ

ಮಂಗಳವಾರ, 17 ಜುಲೈ 2018 (08:50 IST)
ಬೆಂಗಳೂರು: ಮೊನ್ನೆಯಷ್ಟೇ ನಾನು ವಿಷಕಂಠನಂತೆ ಎಂದು ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದ ಸಿಎಂ ಕುಮಾರಸ್ವಾಮಿ ಇಂದು ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಜತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಕಾವೇರಿ ಪ್ರಾಧಿಕಾರ ರಚನೆ ವಿಚಾರವಾಗಿ ನಾಳೆ ಸಂಸದರ ಜತೆ ಸಭೆ ನಡೆಸಲಿದ್ದಾರೆ. ಇದೇ ಕಾರಣಕ್ಕಾಗಿ ದೆಹಲಿಗೆ ತೆರಳಿದ್ದಾರೆ. ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲಾ ಸಂಸದರು ಮತ್ತು ಕೇಂದ್ರ ಪ್ರತಿನಿಧಿಸುವ ಎಲ್ಲಾ ರಾಜ್ಯದ ಸಚಿವರೂ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಕರ್ನಾಟಕ ಭವನದಲ್ಲಿ ನಡೆಯಲಿದೆ.

ಇನ್ನು, ದೇವೇಗೌಡರು ದೆಹಲಿಗೆ ಭೇಟಿ ನೀಡುತ್ತಿರುವ ಉದ್ದೇಶವೇ ಬೇರೆ. ಮುಂಬರುವ ಸಂಸತ್ತು ಅಧಿವೇಶನಕ್ಕೆ ಈಗಿನಿಂದಲೇ ತಯಾರಾಗಲು ದೇವೇಗೌಡರು ಪುತ್ರನ ಜತೆಗೆ ದೆಹಲಿಗೆ ತೆರಳುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕುಮಾರಸ್ವಾಮಿಯಂತಹ ಟ್ರಾಜಿಡಿ ಕಿಂಗ್ ಭಾರತಕ್ಕೆ ಬೇಡ ಎಂದ ಅರುಣ್ ಜೇಟ್ಲಿ