Publish Date: Sat, 26 May 2018 (13:29 IST)
Updated Date: Sat, 26 May 2018 (13:39 IST)
ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರ ಪ್ರಚಾರ ನಡೆಸಲು ಆಗಮಿಸಿದ ಜೆಡಿಎಸ್ ವರಿಷ್ಠ ದೇವೇಗೌಡರು ಮೊಮ್ಮಗನ ಭಾಷಣಕ್ಕೆ ಅಡ್ಡಿ ಮಾಡಿದ್ದಾರೆ.
ಇಂದು ಆರ್ ಆರ್ ನಗರದಲ್ಲಿ ರೋಡ್ ಶೋ ನಡೆಸಿದ ದೇವೇಗೌಡರ ಜತೆಗೆ ಪ್ರಜ್ವಲ್ ರೇವಣ್ಣ ಕೂಡಾ ಇದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಜನ ಪ್ರಜ್ವಲ್ ಭಾಷಣ ಮಾಡುವಂತೆ ಒತ್ತಾಯಿಸಿದರು. ಆದರೆ ಅದನ್ನು ತಡೆದ ದೇವೇಗೌಡರು ಅವರು ಭಾಷಣ ಮಾಡಲ್ಲ ನಡೀರಿ ಎಂದು ಮುನ್ನಡೆದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಬಗ್ಗೆ ಕೇಳಿ ಬಂದ ಪ್ರಶ್ನೆಗೆ ಉತ್ತರಿಸಿದರು. ‘ಮೈತ್ರಿ ಏನಿದ್ದರೂ ಸರ್ಕಾರಕ್ಕೆ ಸಂಬಂಧಿಸಿದಂತೆ ಮಾತ್ರ. ಇಲ್ಲಿ ನನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇನೆ’ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.