Select Your Language

Notifications

webdunia
webdunia
webdunia
webdunia

ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆಗೆ ತಿರುಗೇಟು ನೀಡಿದ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆಗೆ ತಿರುಗೇಟು ನೀಡಿದ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 22 ಮೇ 2018 (08:56 IST)
ಬೆಂಗಳೂರು : ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಸೂಪರ್ ಸ್ಟಾರ್ ರಜನೀಕಾಂತ್ ಅವರು  ಕಾವೇರಿ ನದಿ ನೀರು ಹಂಚಿಕೆ ಕುರಿತು ಹೇಳಿದ ಹೇಳಿಕೆಗೆ ಇದೀಗ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.


ನಟ ರಜನೀಕಾಂತ್ ಅವರು ಮಕ್ಕಳ್ ಮಂಡ್ರಮ್ ಪಕ್ಷದ ಮಹಿಳಾ ವಿಭಾಗದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರ ಈಗಾಲಾದರು ಕಾವೇರಿ ನದಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಸುಪ್ರೀಂಕೋರ್ಟ್ ಹೇಳಿರುವ ಆದೇಶವನ್ನು ಪಾಲಿಸುವುದು ಕರ್ನಾಟಕದ ಜವಾಬ್ದಾರಿಯಾಗಿದೆ. ಅಷ್ಟೇ ಅಲ್ಲದೆ ಕಾವೇರಿ ನಿರ್ವಹಣಾ ಮಂಡಳಿಯ ಆದೇಶವನ್ನು ಕೂಡಲೇ ಜಾರಿಗೆ ತರಬೇಕು’ ಎಂದು ರಜನಿಕಾಂತ್ ಒತ್ತಾಯಿಸಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು,’ ರಜನಿಕಾಂತ್‌ ಅವರಿಗೆ ಕರ್ನಾಟಕಕ್ಕೆ ಬರುವಂತೆ ಆಹ್ವಾನ ನೀಡಿದ್ದೇನೆ. ನಮಗೆ ನೀರಿನ ಕೊರತೆ ಇರುವಾಗ ಅವರಿಗೆ ಹೇಗೆ ಬಿಡುವುದು,ಇಲ್ಲಿಗೆ ಬಂದು ನಮ್ಮ ಆಣೆಕಟ್ಟುಗಳ ಪರಿಸ್ಥಿತಿ ಅವಲೋಕನ ಮಾಡಿದಾಗ ಅವರಿಗೆ ಮನವರಿಕೆಯಾಗಲಿದೆ’ ಎಂದು ತಿರುಗೇಟು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೋತರೂ ಕಾಂಗ್ರೆಸ್ ನವರು ಅದ್ಯಾಕೆ ಸೆಲೆಬ್ರೇಷನ್ ಮಾಡ್ತಿದ್ದಾರೋ: ಅಮಿತ್ ಶಾ ಟಾಂಗ್