Publish Date: Tue, 22 May 2018 (11:34 IST)
Updated Date: Tue, 22 May 2018 (11:38 IST)
ಮಂಗಳೂರು: ಅಧಿಕಾರಕ್ಕೆ ಬಂದರೆ ಸಂಪೂರ್ಣವಾಗಿ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದ ಎಚ್ ಡಿ ಕುಮಾರಸ್ವಾಮಿ ಇದೀಗ ಉಲ್ಟಾ ಹೊಡೆದಿದ್ದಾರೆ.
ಜೆಡಿಎಸ್ ಗೆ ಸಂಪೂರ್ಣ ಬಹುಮತ ಬಂದರೆ ಸಂಪೂರ್ಣವಾಗಿ ಸಾಲಮನ್ನಾ ಮಾಡುವುದಾಗಿ ಹೇಳಿದ್ದೆ. ಆದರೆ ಜನತೆ ನಮಗೆ ಬಹುಮತ ಕೊಟ್ಟಿಲ್ಲ ಎಂದು ಗೊಂದಲದ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ‘ಸಂಪೂರ್ಣವಾಗಿ ಅಲ್ಲದಿದ್ದರೂ ರೈತರಿಗೆ ತೊಂದರೆಯಾಗದಂತಹ ಯೋಜನೆ ಜಾರಿ ಮಾಡುತ್ತೇನೆ. ವಿಶ್ವಾಸಮತ ಸಾಬೀತುಪಡಿಸಿದ ಕೂಡಲೇ ರೈತರಿಗೆ ಅನುಕೂಲವಾಗುವ ಯೋಜನೆಯೊಂದನ್ನು ಘೋಷಿಸುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ನ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಭರವಸೆ ನೀಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.