ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ!

Webdunia
ಮಂಗಳವಾರ, 17 ಮೇ 2022 (09:52 IST)
ಬೆಂಗಳೂರು : ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮೇ 17ಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮೇ 19 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಅಲರ್ಟ್ ಘೋಷಣೆಯ ದಿನಗಳಲ್ಲಿ 100 ಮಿ.ಮೀ ಇಂದ 150 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. 3 ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗೃತಾ ಕ್ರಮವನ್ನು ಕೈಗೊಳ್ಳಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಲರ್ಟ್ ಘೋಷಿಸಿದ ದಿನಗಳಲ್ಲಿ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯಬಾರದು.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments