Select Your Language

Notifications

webdunia
webdunia
webdunia
webdunia

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು , ಶುಕ್ರವಾರ, 2 ಜೂನ್ 2023 (08:01 IST)
ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
 
ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೂನ್ 4ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು