Select Your Language

Notifications

webdunia
webdunia
webdunia
webdunia

ರಾತ್ರಿ ಮಳೆಗೆ ಬೆಂಗಳೂರು ಕಂಗಾಲು

ರಾತ್ರಿ ಮಳೆಗೆ ಬೆಂಗಳೂರು ಕಂಗಾಲು
ಬೆಂಗಳೂರು , ಮಂಗಳವಾರ, 25 ಸೆಪ್ಟಂಬರ್ 2018 (08:44 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ತತ್ತರಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದ್ದು, ಭಾರೀ ತೊಂದರೆಯಾಗಿದೆ.

ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಕೆಲವೆಡೆ ಮರ, ವಿದ್ಯುತ್ ಕಂಬ ಧರೆಗುರುಳಿವೆ. ಅಂಡರ್ ಪಾಸ್ ಗಳಲ್ಲಿ ನೀರು ತುಂಬ ವಾಹನ ಸಂಚಾರ ಕಷ್ಟವಾಗಿದೆ.

ಗಿರಿನಗರದಲ್ಲಿ ವಿದ್ಯುತ್ ಕಂಬದ ಮೇಲೆ ಮರ ಉರುಳಿಬಿದ್ದು ಹೊತ್ತಿ ಉರಿದ ಘಟನೆಯೂ ನಡೆದಿದೆ. ತಗ್ಗು ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿ ರಾತ್ರಿಯಿಡೀ ಜನ ಆತಂಕದಿಂದ ಕಳೆಯುವಂತಾಯಿತು. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ವ್ಯಾಟ್ಸಪ್ ಕರೆ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯುತ್ತಿದೆಯೇ ಬಿಜೆಪಿ?