Select Your Language

Notifications

webdunia
webdunia
webdunia
webdunia

ನಾಳೆಯಿಂದ 3 ದಿನ ರಾಜ್ಯದಲ್ಲಿ ಭಾರೀ ಮಳೆ!

ನಾಳೆಯಿಂದ 3 ದಿನ ರಾಜ್ಯದಲ್ಲಿ ಭಾರೀ ಮಳೆ!
ಬೆಂಗಳೂರು , ಗುರುವಾರ, 25 ನವೆಂಬರ್ 2021 (13:06 IST)
ಬಂಗಾಳ ಕೊಲ್ಲಿಯಿಂದ ಆರಂಭಗೊಂಡಿದ್ದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡ ಹಿನ್ನೆಲೆ ರಾಜ್ಯದಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಬ್ರೇಕ್ ಬಿದಿತ್ತು.
ಈಗಾಗಲೇ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ನವೆಂಬರ್ 26 ರಿಂದ  ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಚಳಿ  ಸಹ ರಾಜ್ಯದಲ್ಲಿ ಆರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ. ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಮತ್ತು ತುಮಕೂರಿನಲ್ಲಿ ನ.26ರಿಂದ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಅಂತ ತಿಳಿಸಿದೆ.
ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಹೇಳಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ತವರು ಮನೆಗೆ ಬಂದ್ದಿದ್ದ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ!