Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಹಲವು ಕಡೆ ಭಾರೀ ಮಳೆ!

ಬೆಂಗಳೂರಿನ ಹಲವು ಕಡೆ ಭಾರೀ ಮಳೆ!
ಬೆಂಗಳೂರು , ಮಂಗಳವಾರ, 13 ಜೂನ್ 2023 (07:11 IST)
ಬೆಂಗಳೂರು: ಸಿಲಿಕಾನ್ ಸಿಟಿಯ ಹಲವೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಷನ್ ಹಾಗೂ ಕೋರಮಂಗಲ ಸುತ್ತಮುತ್ತ ಭಾರೀ ಮಳೆಯಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ಅನುಭವಿಸಿದರು. ಯಮಲೂರಿನ ರಸ್ತೆಯಲ್ಲಿ ಮಳೆ ನೀರು ತುಂಬಿಹೋಗಿತ್ತು. ಕೆರೆಯಂತಾದ ರಸ್ತೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.
 
ಮಾರತಹಳ್ಳಿ ಬಳಿ ಸಪ್ತಗಿರಿ ಲೇಔಟ್ ನಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಟ್ಟಿದ್ದಾರೆ.  ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿ ಭಾಗ ಸೇರಿ ರಾಜ್ಯದ ನಾನಾ ಭಾಗದಲ್ಲಿ ವರುಣಾರ್ಭಟದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ