ಬೆಂಗಳೂರು: ಸಿಲಿಕಾನ್ ಸಿಟಿಯ ಹಲವೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಷನ್ ಹಾಗೂ ಕೋರಮಂಗಲ ಸುತ್ತಮುತ್ತ ಭಾರೀ ಮಳೆಯಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ಅನುಭವಿಸಿದರು. ಯಮಲೂರಿನ ರಸ್ತೆಯಲ್ಲಿ ಮಳೆ ನೀರು ತುಂಬಿಹೋಗಿತ್ತು. ಕೆರೆಯಂತಾದ ರಸ್ತೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.