Publish Date: Fri, 28 Apr 2023 (06:34 IST)
Updated Date: Fri, 28 Apr 2023 (10:36 IST)
ಬೆಂಗಳೂರು : ರಾಜ್ಯದಲ್ಲಿ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನತ್ತ ಬೀಸುತ್ತಿರುವ ಗಾಳಿಯ ಪರಿಣಾಮ ಮುಂದಿನ ಐದು ದಿನಗಳು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿದೆ. ಅಲ್ಲದೇ ಕರಾವಳಿಯಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.