Publish Date: Fri, 26 Aug 2022 (07:18 IST)
Updated Date: Fri, 26 Aug 2022 (09:21 IST)
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ.
ಕಳೆದರೆಡು ದಿನಗಳಿಂದ ಬಿಟ್ಟು, ಬಿಟ್ಟು ಸುರಿಯುತ್ತಿದ್ದ ಮಳೆ, ಇಂದು ಮುಂಜಾನೆಯಿಂದಲೇ ವರುಣ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ.
ರಾಜ್ಯದ ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.