Publish Date: Thu, 20 Jul 2023 (07:38 IST)
Updated Date: Thu, 20 Jul 2023 (10:39 IST)
ಬೆಂಗಳೂರು : ಇಂದಿನಿಂದ ಮತ್ತೆ ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮಳೆ ಜೋರಾಗುವ ಸಾಧ್ಯತೆಯಿದೆ.
ಮುಂದಿನ 5 ದಿನಗಳ ಕಾಲ ಗಾಳಿ, ಗುಡುಗು ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದರೆ, ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.