Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮುಂದಿನ ಮೂರು ತಿಂಗಳು ಭಾರೀ ಮಳೆ ಸಾಧ್ಯತೆ!

ರಾಜ್ಯದಲ್ಲಿ ಮುಂದಿನ ಮೂರು ತಿಂಗಳು ಭಾರೀ ಮಳೆ ಸಾಧ್ಯತೆ!
ಬೆಂಗಳೂರು , ಸೋಮವಾರ, 12 ಸೆಪ್ಟಂಬರ್ 2022 (06:53 IST)
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ತಿಂಗಳು ಮಳೆಯಾಗಲಿದೆ. ಈ ಮಳೆ ಎದುರಿಸಲು ಜನ ಸಿದ್ಧರಾಗಬೇಕಿದೆ ಎಂದು ಹವಾಮಾನ  ತಜ್ಞ ಪ್ರಸಾದ್ ಎಚ್ಚರಿಕೆ ನೀಡಿದರು.

ಕಳೆದೊಂದು ವಾರದಿಂದ ಮಳೆಗೆ ತತ್ತರಿಸಿರುವ ಬೆಂಗಳೂರಲ್ಲಿ ಇನ್ನೂ 3 ತಿಂಗಳ ಕಾಲ ಮುಂದುವರಿಯಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನವೆಂಬರ್ವರೆಗೂ ಮಳೆಯಾಗಲಿದೆ. ಒಟ್ಟಾರೆಯಾಗಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಸೆ. 1 ರಿಂದ ಇದುವರೆಗೂ 211 ಎಂ.ಎಂ ಮಳೆಯಾಗಿದೆ.

ಕರಾವಳಿಗೆ ಮುಂದಿನ 5 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಪೌರಕಾರ್ಮಿಕರಿಗೆ ಬಾಯಿಗೆ ಬಂದಾಗೆ ನಿಂದಿಸಿದ ವ್ಯಕ್ತಿ