Publish Date: Mon, 03 Oct 2022 (06:58 IST)
Updated Date: Sun, 02 Oct 2022 (23:00 IST)
ಬೆಂಗಳೂರು : ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ 24 ಗಂಟೆಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Ramya kosira
Publish Date: Mon, 03 Oct 2022 (06:58 IST)
Updated Date: Sun, 02 Oct 2022 (23:00 IST)