Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು , ಗುರುವಾರ, 25 ಆಗಸ್ಟ್ 2022 (07:21 IST)
ಬೆಂಗಳೂರು : ರಾಜ್ಯದಲ್ಲಿ ನಾಳೆಯವರೆಗೆ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲೂ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗುವ ಸಂಭವ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನಿನ್ನೆ ಯಲ್ಲಾಪುರ ತಾಲೂಕಿನ ಪನಸಗುಳಿಯಲ್ಲಿ ಗಂಗಾವಳಿ ನದಿಯಲ್ಲಿ ಲಾರಿಯೊಂದು ತೇಲಿ ಹೋಗಿದೆ. 

ಲಾರಿಯಲ್ಲಿದ್ದ ಐವರ ರಕ್ಷಣೆಗೆ ಮೊರೆ ಇಟ್ಟಿದ್ದಾರೆ. ತಾತ್ಕಾಲಿಕ ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಚಾಲಕ ದುಸ್ಸಾಹಸಕ್ಕೆ ಮುಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ. ಇನ್ನುಳಿದಂತೆ ಮೈಸೂರು, ರಾಮನಗರ, ಚಾಮರಾಜನಗರ, ಕೋಲಾರದಲ್ಲೂ ಉತ್ತಮ ಮಳೆ ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೂರು ಲಕ್ಷ ಹಣ ಎಗರಿಸಿದ ಕತರ್ನಾಕ್ ಕಳ್ಳರು