Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ!

ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ!
ಬೆಂಗಳೂರು , ಮಂಗಳವಾರ, 6 ಸೆಪ್ಟಂಬರ್ 2022 (07:04 IST)
ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಮಧ್ಯೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮನ್ಸೂನ್ ಚುರುಕು ಆಗಿರುವುದು ಮತ್ತು ಕನ್ಯಾಕುಮಾರಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಮೈಲ್ಮೈ ಸುಳಿಗಾಳಿಯಿಂದ ಮಳೆಯಾಗುತ್ತಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಆಗಲಿದೆ.

ಬೀದರ್, ಕೊಪ್ಪಳ, ಕಲಬುರಗಿ, ಯಾದಗಿರಿ, ಗದಗ, ಬಾಗಲಕೋಟೆ, ರಾಯಚೂರು ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಕಡೆ ಮಳೆಯಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನೀರು ಸರಬರಾಜು‌ ಸ್ಥಗಿತ