Publish Date: Mon, 08 Oct 2018 (08:52 IST)
Updated Date: Mon, 08 Oct 2018 (08:53 IST)
ನವದೆಹಲಿ: ಮುಂದಿನ 24 ಗಂಟೆಗಳೊಳಗೆ ಕೇರಳ, ಕರ್ನಾಟಕ ಸೇರಿದಂತೆ ದೇಶದ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳ ಮತ್ತು ಕರ್ನಾಟಕ ಈಗಷ್ಟೇ ಮಳೆಯ ಅವಾಂತರದಿಂದ ಚೇತರಿಸುತ್ತಿದೆ. ಅದರ ಬೆನ್ನಲ್ಲೇ ಮತ್ತೆ ಮಳೆ ಅಬ್ಬರಿಸುವ ಸೂಚನೆ ಸಿಕ್ಕಿದೆ.
ಇವೆರಡೂ ರಾಜ್ಯಗಳ ಜತೆಗೆ ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲೂ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಕಡಲ ತೀರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.