Select Your Language

Notifications

webdunia
webdunia
webdunia
webdunia

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ
ನವದೆಹಲಿ , ಶನಿವಾರ, 10 ಜೂನ್ 2023 (08:30 IST)
ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
 
ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾನುವಾರ ಬಿಎಂಟಿಸಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿದ್ದರಾಮಯ್ಯ…!